ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಹೀರೊ ಮೋಟೊಕಾರ್ಪ್‌ಗೆ ದೆಹಲಿಯ ಜಿಎಸ್‌ಟಿ ಪ್ರಾಧಿಕಾರವು ₹17 ಕೋಟಿ ಪಾವತಿಸುವಂತೆ ನೋಟಿಸ್ ನೀಡಿದೆ.
2019–2020ರ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಾವತಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ₹9.38 ಕೋಟಿ ತೆರಿಗೆ, ₹7.32 ಕೋಟಿ ಬಡ್ಡಿ ಮತ್ತು ₹93.86 ಲಕ್ಷ ದಂಡವನ್ನು ಪಾವತಿಸಬೇಕಾಗಿದೆ ಎಂದು ಕಂಪನಿ ಭಾನುವಾರ ತಿಳಿಸಿದೆ.
ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಈ ನೋಟಿಸ್, ಕಂಪನಿಯ ಹಣಕಾಸು, ಕಾರ್ಯಾಚರಣೆ ಅಥವಾ ಇತರೆ ಯಾವುದೇ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.