ನವದೆಹಲಿ: ಹೀರೊ ಮೋಟೊಕಾರ್ಪ್ ಕಂಪನಿಯು ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ ದ್ವಿಚಕ್ರ ವಾಹನಗಳ ಬೆಲೆಯನ್ನು ಗರಿಷ್ಠ ₹ 1,500ರವರೆಗೆ ಹೆಚ್ಚಿಸಲಿದೆ.
ಬೆಲೆ ಏರಿಕೆ ಪ್ರಮಾಣದಲ್ಲಿ ಮಾದರಿಯಿಂದ ಮಾದರಿಗೆ ವ್ಯತ್ಯಾಸ ಇರಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ಹಣದುಬ್ಬರದ ಕಾರಣದಿಂದಾಗಿ ಬೆಲೆ ಏರಿಕೆ ಮಾಡಬೇಕಾಗಿದೆ ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ನಿರಂಜನ್ ಗುಪ್ತ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.