ನವದೆಹಲಿ: ತ್ವರಿತವಾಗಿ ಮಾರಾಟವಾಗುವಗ್ರಾಹಕ ಬಳಕೆ ಉತ್ಪನ್ನಗಳ (ಎಫ್‌ಎಂಸಿಜಿ) ಕಂಪನಿ ಹಿಂದುಸ್ತಾನ್ ಯೂನಿಲಿವರ್, ಸೆಪ್ಟೆಂಬರ್ ತ್ರೈಮಾಸಿಕದಲ್ಲಿನ ನಿವ್ವಳ ಲಾಭದಲ್ಲಿ ಶೇಕಡ 10.69ರಷ್ಟು ಏರಿಕೆ ದಾಖಲಿಸಿದೆ. ಕಂಪನಿಯು ₹ 2,185 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 1,974 ಕೋಟಿ ಲಾಭ ಕಂಡಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಆದಾಯದಲ್ಲಿ ಶೇ 11.31ರಷ್ಟು ಹೆಚ್ಚಳ ಆಗಿದ್ದು, ₹ 12,812 ಕೋಟಿಗೆ ತಲುಪಿದೆ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.