ನವದೆಹಲಿ: ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ವಸ್ತು ತಯಾರಿಸುವ (ಎಫ್‌ಎಂಸಿಜಿ) ಕಂಪನಿಯಾದ ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್‌ಯುಎಲ್) 2023–24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ₹2,561 ಕೋಟಿ ಲಾಭ ಗಳಿಸಿದೆ.
2022–23ರಲ್ಲಿ ಇದೇ ತ್ರೈಮಾಸಿಕದಲ್ಲಿ ₹2,601 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 1.53ರಷ್ಟು ಇಳಿಕೆಯಾಗಿದೆ. ವರಮಾನವು ₹15,375 ಕೋಟಿಯಿಂದ ₹15,441 ಕೋಟಿಗೆ ಹೆಚ್ಚಳವಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಬುಧವಾರ ತಿಳಿಸಿದೆ.
2023–24ರ ಪೂರ್ಣ ಆರ್ಥಿಕ ವರ್ಷದಲ್ಲಿ ನಿವ್ವಳ ಲಾಭವು ₹10,143 ಕೋಟಿಯಿಂದ ₹10,282 ಕೋಟಿಗೆ ಏರಿಕೆಯಾಗಿದೆ. ಒಟ್ಟು ವರಮಾನವು ₹62,707 ಕೋಟಿ ಸಂಗ್ರಹವಾಗಿದ್ದು, ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹61,092 ಕೋಟಿ ಆಗಿತ್ತು ಎಂದು ತಿಳಿಸಿದೆ.
ಕಂಪನಿಯ ಷೇರಿನ ಮೌಲ್ಯವು ಬಿಎಸ್‌ಇಯಲ್ಲಿ ಶೇ 0.16ರಷ್ಟು ಇಳಿಕೆಯಾಗಿದ್ದು, ಪ್ರತಿ ಷೇರಿನ ಬೆಲೆ ₹2,259 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.