ನವದೆಹಲಿ: ಹುಂಡೈ ಮೋಟರ್ಸ್ ಇಂಡಿಯಾ ಕಂಪನಿಯ ಆರಂಭಿಕ ಸಾರ್ವಜನಿಕ ಕೊಡುಗೆಯು (ಐಪಿಒ) ಅಕ್ಟೋಬರ್ 14ರಂದು ಸಾರ್ವಜನಿಕರಿಗೆ ಮುಕ್ತವಾಗಿರಲಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ.
ಕಂಪನಿಯು ಒಟ್ಟು ₹25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ನಿರ್ಧರಿಸಿದೆ. ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಐಪಿಒ ಮೂಲಕ ₹21 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಿತ್ತು. ಎಲ್‌ಐಸಿ ಬಳಿಕ ಹುಂಡೈ ಕಂಪನಿಯು ಅತಿಹೆಚ್ಚು ಬಂಡವಾಳ ಸಂಗ್ರಹಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.