ನವದೆಹಲಿ: ಹುಂಡೈ ಮೋಟರ್ ಇಂಡಿಯಾ ಕಂಪನಿಯು ಜನವರಿ 1ರಿಂದ ಜಾರಿಗೆ ಬರುವಂತೆ ತನ್ನ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಗುರುವಾರ ತಿಳಿಸಿದೆ.
ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಕಂಪನಿ ಹೇಳಿದೆ. ಮಾರುತಿ ಸುಜುಕಿ, ಟಾಟಾ ಮೋಟರ್ಸ್, ಮಹೀಂದ್ರ, ಹೋಂಡಾ ಮತ್ತು ಔಡಿ ಕಂಪನಿಗಳು ಕೂಡಾ ಜನವರಿಯಿಂದ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.