ADVERTISEMENT

ಐಸಿಐಸಿಐ ಬ್ಯಾಂಕ್‌ ಲಾಭ ಏರಿಕೆ

ಪಿಟಿಐ
Published 26 ಅಕ್ಟೋಬರ್ 2024, 14:10 IST
Last Updated 26 ಅಕ್ಟೋಬರ್ 2024, 14:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್‌ 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹11,746 ಕೋಟಿ ನಿವ್ವಳ ಲಾಭಗಳಿಸಿದೆ.

ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹10,261 ಕೋಟಿ ಲಾಭಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 14.5ರಷ್ಟು ಏರಿಕೆಯಾಗಿದೆ. 

ಈ ತ್ರೈಮಾಸಿಕದಲ್ಲಿ ವರಮಾನ ಗಳಿಕೆಯಲ್ಲೂ ಏರಿಕೆಯಾಗಿದ್ದು, ₹47,714 ಕೋಟಿ ಗಳಿಸಿದೆ. ಬಡ್ಡಿ ವರಮಾನ ₹40,573 ಕೋಟಿ ಆಗಿದೆ. ನಿವ್ವಳ ಬಡ್ಡಿ ವರಮಾನದಲ್ಲಿ ಶೇ 9.55ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹20,048 ಕೋಟಿ ಗಳಿಸಿದೆ.

ADVERTISEMENT

ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 2.48ರಿಂದ ಶೇ 1.97ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.43ರಿಂದ ಶೇ 0.42ಕ್ಕೆ ತಗ್ಗಿದೆ ಎಂದು ಬ್ಯಾಂಕ್‌ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.