ಬೆಂಗಳೂರು: ಭಾರತದ ಆರ್ಥಿಕತೆ ಬೆಳವಣಿಗೆಯು (ಜಿಡಿಪಿ) 2023–24ನೇ ಹಣಕಾಸು ವರ್ಷದಲ್ಲಿ ಶೇ 6.7ರಷ್ಟು ಇರಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯು (ಐಎಂಎಫ್) ಅಂದಾಜಿಸಿದೆ. ಈ ಮೊದಲು ಶೇ 6.3ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.
2024–25ನೇ ಹಣಕಾಸು ವರ್ಷದಲ್ಲಿ ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ. ಈ ಮೊದಲು ಶೇ 6.3ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಹೇಳಿತ್ತು. ಅಲ್ಲದೇ, 2025–26ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ 6.5ರಷ್ಟು ದಾಖಲಾಗಲಿದೆ ಎಂದು ಅಂದಾಜಿಸಿದೆ.
2023–24ರ ಹಣಕಾಸು ವರ್ಷದಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆ ದರವನ್ನು ಶೇ 0.1ರಷ್ಟು ಹೆಚ್ಚಿಸಿದ್ದು, ಶೇ 3.1ರಷ್ಟು ದಾಖಲಾಗಲಿದೆ. 2024–25ನೇ ಹಣಕಾಸು ವರ್ಷದಲ್ಲಿಯೂ ಶೇ 3.1ರಷ್ಟು ಬೆಳವಣಿಗೆ ಹೊಂದಲಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.