ಚೆನ್ನೈ: ‘ಫಾಕ್ಸ್‌ಕಾನ್ ಜತೆ ಒಡಂಬಡಿಕೆ ಮಾಡಿಕೊಂಡಿರುವ ಗೂಗಲ್, ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್ ತಯಾರಿಕಾ ಘಟಕವನ್ನು ತಮಿಳುನಾಡಿನಲ್ಲಿ ಸ್ಥಾಪಿಸಲಿದೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಹೇಳಿದ್ದಾರೆ.
ಗೂಗಲ್ ಸಂಸ್ಥೆಯೊಂದಿಗೆ ತಮಿಳುನಾಡು ಸರ್ಕಾರ ನಡೆಸಿದ ಮಾತುಕತೆಯ ಫಲವಾಗಿ ಈ ನಿರ್ಧಾರ ಹೊರಬಿದ್ದಿದೆ.
‘ಈ ವಿಷಯವಾಗಿ ಗೂಗಲ್‌ನ ಅಧಿಕಾರಿಗಳು ಅತಿ ಶೀಘ್ರದಲ್ಲಿ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
‘ಗೂಗಲ್ ಪಿಕ್ಸೆಲ್ ತಯಾರಿಕಾ ಘಟಕವನ್ನು ಸ್ಥಾಪಿಸಲು ಚೆನ್ನೈ ಸಮೀಪದಲ್ಲೇ ಉತ್ತಮ ಸ್ಥಳಾವಕಾಶ ಇದೆ. ಈ ಘಟಕ ಸ್ಥಾಪನೆಯಿಂದಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪದವಿ ಹೊಂದಿರುವ ಯುವಜನತೆಗೆ ಉದ್ಯೋಗಾವಕಾಶ ಸಿಗಲಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.