ನವದೆಹಲಿ: ಮೂಲಸೌಕರ್ಯ ಅಭಿವೃದ್ಧಿ, ನಗರೀಕರಣ ಹಾಗೂ ಪೂರಕ ಸುಧಾರಣಾ ಕ್ರಮಗಳ ಕಾರಣದಿಂದಾಗಿ ದೇಶದಲ್ಲಿ ಉಕ್ಕಿಗೆ ಬೇಡಿಕೆಯು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಟಾಟಾ ಸ್ಟೀಲ್ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿದ್ದಾರೆ.
ಕಂಪನಿಯ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ‘2022–23ನೆಯ ಸಾಲಿನಲ್ಲಿ ಭಾರತದಲ್ಲಿ ಉಕ್ಕಿನ ಬಳಕೆಯು ಶೇ 10ರಷ್ಟು ಹೆಚ್ಚಾಗಿದೆ’ ಎಂದು ಹೇಳಿದ್ದಾರೆ. ‘ಮುಂದಿನ ಒಂದು ದಶಕದ ಅವಧಿಯಲ್ಲಿ ದೇಶದ ಜಿಡಿಪಿ ಬೆಳೆದಂತೆಲ್ಲ, ಉಕ್ಕಿನ ಬೇಡಿಕೆ ಕೂಡ ಹೆಚ್ಚುತ್ತ ಸಾಗಲಿದೆ’ ಎಂದು ಅವರು ಅಂದಾಜಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.