ನವದೆಹಲಿ: ದೇಶದಲ್ಲಿ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023–24ನೇ ಆರ್ಥಿಕ ವರ್ಷದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯು ಶೇ 21ರಷ್ಟು ಹೆಚ್ಚಳವಾಗಿದೆ. ಒಟ್ಟು 18.48 ಗಿಗಾವಾಟ್ ಉತ್ಪಾದನೆಯಾಗಿದೆ.
2022–23ರಲ್ಲಿ 15.27 ಗಿಗಾವಾಟ್‌ನಷ್ಟು ಉತ್ಪಾದನೆ ಆಗಿತ್ತು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯವು ತಿಳಿಸಿದೆ.
ದೇಶದಲ್ಲಿ 2030ರ ವೇಳೆಗೆ 500 ಗಿಗಾವಾಟ್‌ನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿ ಹೊಂದಲಾಗಿದೆ. ಈ ಗುರಿ ಸಾಧನೆಗಾಗಿ ಮುಂದಿನ ಆರು ವರ್ಷಗಳಲ್ಲಿ ವಾರ್ಷಿಕವಾಗಿ 50 ಗಿಗಾವಾಟ್‌ನಷ್ಟು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಇಂಧನ ವಲಯದ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.