ನವದೆಹಲಿ: ಎರಡು ವಾರಗಳ ಹಿಂದೆ ಇಂಧನ ರಫ್ತು ತೆರಿಗೆಗಳನ್ನು ಸ್ವಲ್ಪಮಟ್ಟಿಗೆ ಕಡಿತಗೊಳಿಸಿದ್ದ ಕೇಂದ್ರ ಸರ್ಕಾರ, ಗುರುವಾರ ಹೆಚ್ಚಿಸಿದೆ. ಸ್ಥಳೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆ (ವಿಂಡ್‌ಫಾಲ್ ಟ್ಯಾಕ್ಸ್) ಪ್ರಮಾಣವನ್ನು ಕಡಿತಗೊಳಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಜೆಟ್ ಇಂಧನದ ಮೇಲಿನ ರಫ್ತು ತೆರಿಗೆಯನ್ನು ಪ್ರತಿ ಲೀಟರ್‌ಗೆ ಶೂನ್ಯದಿಂದ ₹2ಗೆ ಏರಿಸಲಾಗಿದ್ದರೆ, ಡೀಸೆಲ್ ಅನ್ನು ಪ್ರತಿ ಲೀಟರ್‌ಗೆ ₹5ಯಿಂದ ₹7ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ತೆರಿಗೆಯನ್ನು ಪ್ರತಿ ಟನ್‌ಗೆ ₹17,750ರಿಂದ ₹13,000 ಕಡಿತಗೊಳಿಸಲಾಗಿದೆ. ಹೊಸ ತೆರಿಗೆಯು ಆಗಸ್ಟ್ 19 ರಿಂದಲೇ ಜಾರಿಗೆ ಬರಲಿವೆ.
ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ದೇಶವಾಗಿರುವ ಭಾರತವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಆಕಸ್ಮಿಕ ಲಾಭ ತೆರಿಗೆ ಪರಿಷ್ಕರಿಸಲಿದೆ ಎಂದು ಕಳೆದ ವಾರ ಸರ್ಕಾರದ ಉನ್ನತ ಮೂಲವೊಂದು ‘ರಾಯಿಟರ್ಸ್’ಗೆ ತಿಳಿಸಿತ್ತು.
ಕೇಂದ್ರ ಸರ್ಕಾರವು ಈ ತಿಂಗಳ ಆರಂಭದಲ್ಲಿ ಇಂಧನ ರಫ್ತು ತೆರಿಗೆಯನ್ನು ಕಡಿತಗೊಳಿಸಿ, ಆಕಸ್ಮಿಕ ಲಾಭ ತೆರಿಗೆಯನ್ನು ಹೆಚ್ಚಿಸಿತ್ತು.
ಇದನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.