ADVERTISEMENT

ದೇಶಿ ಕಚ್ಚಾತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2023, 11:11 IST
Last Updated 30 ಸೆಪ್ಟೆಂಬರ್ 2023, 11:11 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು (ರಾಯಿಟರ್ಸ್‌): ಕೇಂದ್ರ ಸರ್ಕಾರವು ಶನಿವಾರದಿಂದ ಜಾರಿಗೆ ಬರುವಂತೆ ದೇಶಿ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆ ಹೆಚ್ಚಿಸಿದೆ. ಆದರೆ, ವಿಮಾನ ಇಂಧನ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಇಳಿಕೆ ಮಾಡಿದೆ.

ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ ₹10 ಸಾವಿರ ಇದ್ದಿದ್ದು ₹12,100ಕ್ಕೆ ಏರಿಕೆ ಆಗಿದೆ.

ADVERTISEMENT

ವಿಮಾನ ಇಂಧನದ (ಎಟಿಎಫ್‌) ಮೇಲಿನ ತೆರಿಗೆಯನ್ನು ಪ್ರತಿ ಲೀಟರಿಗೆ ₹3.50 ರಿಂದ ₹2.50ಕ್ಕೆ ಇಳಿಕೆ ಮಾಡಲಾಗಿದೆ. ಅಂತೆಯೇ ಡೀಸೆಲ್‌ ಮೇಲಿನ ತೆರಿಗೆಯನ್ನು ಲೀಟರಿಗೆ ₹5.50 ರಿಂದ ₹5ಕ್ಕೆ ತಗ್ಗಿಸಲಾಗಿದೆ.

ಸೆಪ್ಟೆಂಬರ್ 16ರಂದು ತೆರಿಗೆ ದರ ಪರಿಷ್ಕರಣೆ ಮಾಡಿದ್ದ ಸರ್ಕಾರವು ದೇಶಿ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ₹6,700 ರಿಂದ ₹10 ಸಾವಿರಕ್ಕೆ ಹೆಚ್ಚಳ ಮಾಡಿತ್ತು.

ಪೆಟ್ರೋಲ್‌ ರಫ್ತು ಮೇಲೆ ಶೂನ್ಯ ತೆರಿಗೆಯನ್ನು ಮುಂದುವರಿಸಲಾಗಿದೆ. ಹಿಂದಿನ ಎರಡು ವಾರಗಳ ಇಂಧನದ ಸರಾಸರಿ ದರದ ಆಧಾರದ ಮೇಲೆ ಪ್ರತಿ 15 ದಿನಗಳಿಗೆ ಒಮ್ಮೆ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. 2022ರ ಜುಲೈ 1ರಿಂದ ಆಕಸ್ಮಿಕ ಲಾಭ ತೆರಿಗೆ ವಿಧಿಸುವುದನ್ನು ಜಾರಿಗೆ ತರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.