ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತನ್ನು ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ದೇಶದಲ್ಲಿ ದರ ಏರಿಕೆ ತಡೆಯುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈಗಾಗಲೇ ಪಾವತಿಯಾಗಿರುವ ವಹಿವಾಟಿಗೆ ಸಂಬಂಧಿಸಿದ ಸಾಗಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಉಕ್ರೇನ್ ಮೇಲೆ ಫೆಬ್ರುವರಿಯಲ್ಲಿ ರಷ್ಯಾ ಅತಿಕ್ರಮಣ ಆರಂಭಿಸಿದ ಬಳಿಕ ಕಪ್ಪು ಸಮುದ್ರ ಮಾರ್ಗವಾಗಿ ಗೋಧಿ ಪೂರೈಕೆ ಕಡಿಮೆಯಾದ ಬೆನ್ನಲ್ಲೇ ಜಾಗತಿಕ ಖರೀದಿದಾರರು ಭಾರತದತ್ತ ಮುಗಿಬಿದ್ದಿದ್ದರು.
ಭಾರತವು ವಿಶ್ವದ ಎರಡನೇ ಅತಿದೊಡ್ಡ ಗೋಧಿ ಉತ್ಪಾದಕ ರಾಷ್ಟ್ರವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.