ನವದೆಹಲಿ: ಭಾರತವು 2027ರ ವೇಳೆಗೆ ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇಂಡೋ–ಪೆಸಿಫಿಕ್ ಪ್ರಾದೇಶಿಕ ಸಂವಾದದಲ್ಲಿ ಬುಧವಾರ ಮಾತನಾಡಿದ ಅವರು, ಈ ವರ್ಷ ದೇಶದ ಆರ್ಥಿಕ ಬೆಳವಣಿಗೆಯು ಶೇ 7ಕ್ಕಿಂತಲೂ ಕಡಿಮೆ ಇರುವ ಅಂದಾಜು ಮಾಡಲಾಗಿದೆ. ಹೀಗಿದ್ದರೂ ಜಾಗತ್ತಿನ ಪ್ರಮುಖ ಆರ್ಥಿಕತೆಗಳಲ್ಲಿ ಹೆಚ್ಚಿನ ಪ್ರಮಾಣದ ಬೆಳವಣಿಗೆ ದರ ಇದಾಗಿರಲಿದೆ. ದೇಶದ ಆರ್ಥಿಕತೆ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.