ADVERTISEMENT

ಏಷ್ಯಾದ 2ನೆಯ ಅತಿದೊಡ್ಡ ಆರ್ಥಿಕತೆ ಆಗಲಿದೆ ಭಾರತ

ಪಿಟಿಐ
Published 7 ಜನವರಿ 2022, 16:41 IST
Last Updated 7 ಜನವರಿ 2022, 16:41 IST

ನವದೆಹಲಿ: 2030ಕ್ಕೂ ಮೊದಲು ಭಾರತದ ಅರ್ಥ ವ್ಯವಸ್ಥೆಯು ಜಪಾನ್ ದೇಶವನ್ನು ಹಿಂದಿಕ್ಕಿ, ಏಷ್ಯಾದ ಎರಡನೆಯ ಅತಿದೊಡ್ಡ ಅರ್ಥ ವ್ಯವಸ್ಥೆ ಆಗುವ ಸಾಧ್ಯತೆ ಇದೆ ಎಂದು ಐಎಚ್‌ಎಸ್‌ ಮರ್ಕಿಟ್ ಸಂಸ್ಥೆ ಅಂದಾಜಿಸಿದೆ. ಆಗ ಭಾರತದ ಅರ್ಥ ವ್ಯವಸ್ಥೆಯು ವಿಶ್ವದ ಮೂರನೆಯ ಅತಿದೊಡ್ಡ ಅರ್ಥ ವ್ಯವಸ್ಥೆ ಆಗಲಿದೆ ಎಂದು ಕೂಡ ಅದು ಅಂದಾಜಿಸಿದೆ.

ಈಗ ಭಾರತದ್ದು ಜಗತ್ತಿನ ಆರನೆಯ ಅತಿದೊಡ್ಡ ಅರ್ಥ ವ್ಯವಸ್ಥೆ. ಅಮೆರಿಕ, ಚೀನಾ ಮತ್ತು ಜಪಾನ್ ಮೊದಲ ಮೂರು ಸ್ಥಾನಗಳಲ್ಲಿ ಇವೆ. ಜರ್ಮನಿ ಮತ್ತು ಬ್ರಿಟನ್ ಕ್ರಮವಾಗಿ ನಾಲ್ಕು ಮತ್ತು ಐದನೆಯ ಸ್ಥಾನಗಳಲ್ಲಿ ಇವೆ. ‘ಮುಂದಿನ ಒಂದು ದಶಕದ ಅವಧಿಯಲ್ಲಿ ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ದರವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುವ ವ್ಯವಸ್ಥೆಗಳ ಪೈಕಿ ಒಂದಾಗಿರಲಿದೆ’ ಎಂದು ಸಂಸ್ಥೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT