ನವದೆಹಲಿ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್ 2024–25ರ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹2,403 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹1,709 ಕೋಟಿ ಲಾಭ ಗಳಿಸಲಾಗಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 41ರಷ್ಟು ಏರಿಕೆಯಾಗಿದೆ. ವಸೂಲಾಗದ ಸಾಲದ ಪ್ರಮಾಣವು ಇಳಿಕೆಯಾಗಿದ್ದರಿಂದ ಲಾಭದಲ್ಲಿ ಏರಿಕೆಯಾಗಿದೆ ಎಂದು ಬ್ಯಾಂಕ್, ಷೇರುಪೇಟೆಗೆ ಸೋಮವಾರ ತಿಳಿಸಿದೆ.
ಒಟ್ಟು ವರಮಾನವು ಹಿಂದಿನ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹14,759 ಕೋಟಿ ಆಗಿತ್ತು. ಅದು ಈ ತ್ರೈಮಾಸಿಕದಲ್ಲಿ ₹16,945 ಕೋಟಿಗೆ ಏರಿಕೆಯಾಗಿದೆ. ಬಡ್ಡಿ ವರಮಾನವು ₹15,039 ಕೋಟಿಯಷ್ಟಾಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣ (ಜಿಎನ್‌ಪಿಎ) ಶೇ 5.47ರಿಂದ ಶೇ 3.77ಕ್ಕೆ ಕುಸಿದಿದೆ. ನಿವ್ವಳ ಎನ್‌ಪಿಎ ಶೇ 0.70ರಿಂದ ಶೇ 0.39ಕ್ಕೆ ಇಳಿದಿದೆ.
ಜೂನ್ ಅಂತ್ಯಕ್ಕೆ ಬ್ಯಾಂಕ್‌ನ ಬಂಡವಾಳ ಅನುಪಾತ (ಸಿಎಆರ್) ಶೇ 16.47ರಷ್ಟಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.