ಕೋಲ್ಕತ್ತ: 2024–25ನೇ ಹಣಕಾಸು ವರ್ಷದಲ್ಲಿ ದೇಶದ ಹೋಟೆಲ್ ಉದ್ಯಮದ ವರಮಾನವು ಶೇ 7ರಿಂದ ಶೇ 9ರ ವರೆಗೆ ಹೆಚ್ಚಳವಾಗಲಿದೆ ಎಂದು ಕ್ರೆಡಿಟ್ ರೇಟಿಂಗ್ ಸಂಸ್ಥೆ ಐಸಿಆರ್‌ಎ ಅಂದಾಜಿಸಿದೆ.
ಲೋಕಸಭಾ ಚುನಾವಣೆ ಸಮಯದ ಹೊರತಾಗಿಯೂ ಪ್ರಯಾಣ, ಸಭೆಗಳ ಆಯೋಜನೆಗೆ ಬೇಡಿಕೆ ಹೆಚ್ಚಿದೆ. ಸಮ್ಮೇಳನ ಮತ್ತು ವಸ್ತು ಪ್ರದರ್ಶನಗಳಂತಹ ಕಾರ್ಯಕ್ರಮಗಳು ಈ ವಲಯದ ಬೇಡಿಕೆಯನ್ನು ಹೆಚ್ಚಿಸಲಿವೆ ಎಂದು ಹೇಳಿದೆ.
2023–24ನೇ ಹಣಕಾಸು ವರ್ಷದಲ್ಲಿ ಹೋಟೆಲ್ ಕೊಠಡಿಗಳ ಸರಾಸರಿ ದರವು ₹7,200ರಿಂದ ₹7,400ಕ್ಕೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಮುಂದಿನ ಹಣಕಾಸು ವರ್ಷದಲ್ಲಿ ಈ ದರವು ₹7,800ರಿಂದ ₹8,000ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.