ADVERTISEMENT

ಐ.ಟಿ. ಉದ್ಯಮದಲ್ಲಿ ಎರಡು ಅಂಕಿಗಳ ಬೆಳವಣಿಗೆ: ವಿಪ್ರೊ ಸ್ಥಾಪಕ ಅಜೀಂ ಪ್ರೇಮ್‌ಜಿ

ಪಿಟಿಐ
Published 7 ಜುಲೈ 2021, 13:04 IST
Last Updated 7 ಜುಲೈ 2021, 13:04 IST
ವಿಪ್ರೊ ಸ್ಥಾಪಕ ಅಜೀಂ ಪ್ರೇಮ್‌ಜಿ
ವಿಪ್ರೊ ಸ್ಥಾಪಕ ಅಜೀಂ ಪ್ರೇಮ್‌ಜಿ    

ಮುಂಬೈ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಮಾಹಿತಿ ತಂತ್ರಜ್ಞಾನ (ಐ.ಟಿ.) ಉದ್ಯಮದ ಆದಾಯವು ಎರಡು ಅಂಕಿಗಳ ಬೆಳವಣಿಗೆಯನ್ನು ದಾಖಲಿಸಲಿದೆ ಎಂದು ವಿಪ್ರೊ ಸ್ಥಾಪಕ ಅಜೀಂ ಪ್ರೇಮ್‌ಜಿ ಅಂದಾಜಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಡುವೆಯೂ ಐ.ಟಿ. ಉದ್ಯಮವು ಶೇಕಡ 2ರಿಂದ ಶೇ 3ರಷ್ಟು ಬೆಳವಣಿಗೆ ಸಾಧಿಸಿದೆ. 2020–21ರಲ್ಲಿ ಒಟ್ಟು 1.58 ಲಕ್ಷ ಉದ್ಯೋಗ ಸೃಷ್ಟಿಸಿದೆ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ವೃತ್ತಿಪರರಿಗೆ ಮನೆಗಳಿಂದಲೂ ಕಚೇರಿಯಿಂದಲೂ ಕೆಲಸ ಮಾಡಲು ಅವಕಾಶ ಕಲ್ಪಿಸಿರುವುದು ಸ್ಪರ್ಧಾತ್ಮಕವಾಗಿ ಬಹಳ ಪ್ರಯೋಜನಕಾರಿ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.