ADVERTISEMENT

ಸ್ವಸಹಾಯ ಸದಸ್ಯೆಯರಿಗೆ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಆರ್ಥಿಕ ನೆರವು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 14:19 IST
Last Updated 19 ಅಕ್ಟೋಬರ್ 2024, 14:19 IST
<div class="paragraphs"><p>ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌</p></div>

ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌

   

ಚೆನ್ನೈ: ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ಸರ್ಕಾರಿ ಸ್ವಾಮ್ಯದ  ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಶನಿವಾರ ‘ಮಹಿಳಾ ಸಕ್ಷಮ್’ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಕೇಂದ್ರದ ದೀನದಯಾಳ್‌ ಅಂತ್ಯೋದಯ ಯೋಜನೆ– ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಡಿ ರಚಿಸಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ADVERTISEMENT

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಅನುಷ್ಠಾನಗೊಳಿಸಿರುವ ಲಖ್‌ಪತಿ ದೀದಿ ಯೋಜನೆಯ ಮಾದರಿಯಲ್ಲಿಯೇ ಈ ಯೋಜನೆಯನ್ನು ರೂಪಿಸಲಾಗಿದೆ. ಸ್ವಸಹಾಯ ಗುಂಪುಗಳ ಆರ್ಥಿಕ ಬಲವರ್ಧನೆಗೆ ಒತ್ತು ನೀಡುವುದು ಇದರ ಉದ್ದೇಶವಾಗಿದೆ ಎಂದು ಹೇಳಿದೆ. 

ಆರ್ಥಿಕ ನೆರವು ಮತ್ತು ಉದ್ಯಮ ಬೆಂಬಲದ ಮೂಲಕ ಮಹಿಳೆಯ ಕುಟುಂಬವೊಂದು ವಾರ್ಷಿಕವಾಗಿ ಕನಿಷ್ಠ ₹1 ಲಕ್ಷ ಆದಾಯಗಳಿಸುವಂತೆ ಮಾಡಲಾಗುತ್ತದೆ. ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ವಸಹಾಯ ಗುಂಪಿನ ಪ್ರತಿ ಸದಸ್ಯೆಗೆ ₹10 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.