ನವದೆಹಲಿ: ದೇಶದ ಸೇವಾ ವಲಯದ ಚಟುವಟಿಕೆಯು ಅಕ್ಟೋಬರ್ ತಿಂಗಳಲ್ಲಿ ಸಕಾರಾತ್ಮಕ ಬೆಳವಣಿಗೆ ದಾಖಲಿಸಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಬುಧವಾರ ತಿಳಿಸಿದೆ.
ಸೇವಾ ವಲಯದ ಚಟುವಟಿಕೆ ಸೂಚಿಸುವ ಎಚ್‌ಎಸ್‌ಬಿಸಿ ಇಂಡಿಯಾದ ಸರ್ವಿಸಸ್ ಬ್ಯುಸಿನೆಸ್ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 10 ತಿಂಗಳ ಕನಿಷ್ಠ ಮಟ್ಟವಾದ 57.7ಕ್ಕೆ ದಾಖಲಾಗಿತ್ತು. ಅಕ್ಟೋಬರ್‌ನಲ್ಲಿ 58.5ಕ್ಕೆ ಏರಿಕೆಯಾಗಿದೆ. ಉತ್ಪಾದನೆ ಮತ್ತು ಹೊಸ ವಹಿವಾಟಿನಲ್ಲಿನ ಹೆಚ್ಚಳದಿಂದ ಸೂಚ್ಯಂಕ ಏರಿಕೆಯಾಗಿದೆ. ಜೊತೆಗೆ, ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿದೆ ಎಂದು ತಿಳಿಸಿದೆ.
2023ರ ಅಕ್ಟೋಬರ್‌ನಲ್ಲಿ ಸೂಚ್ಯಂಕವು 58.4 ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.