ನವದೆಹಲಿ: 2018–19ರ ಬೆಳೆ ವರ್ಷದ ಮುಂಗಾರು ಹಂಗಾಮಿನಲ್ಲಿ 14.15 ಕೋಟಿ ಟನ್‌ಗಳಷ್ಟು ಆಹಾರ ಧಾನ್ಯ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಹಿಂದಿನ ವರ್ಷದ ಈ ಅವಧಿಯಲ್ಲಿ 14.07 ಕೋಟಿ ಟನ್‌ಗಳಷ್ಟು ಆಹಾರ ಧಾನ್ಯಗಳನ್ನು ಉತ್ಪಾದಿಸಲಾಗಿತ್ತು.
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರು ಬುಧವಾರ ಇಲ್ಲಿ ಬಿಡುಗಡೆ ಮಾಡಿರುವ ಮುಂಗಾರಿನ ಆಹಾರ ಧಾನ್ಯ ಉತ್ಪಾ
ದನೆಯ ಅಂದಾಜು ವರದಿಯಲ್ಲಿ ಈ ವಿವರಗಳು ಇವೆ. ಈ ಬಾರಿಯ ಉತ್ಪಾದನೆಯು ದಾಖಲೆ ಪ್ರಮಾಣದಲ್ಲಿ ಇರಲಿದೆ. 2012 ರಿಂದ 2017ರ ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನಾ ಪ್ರಮಾಣವು 1.19 ಕೋಟಿ ಟನ್‌ಗಳಷ್ಟು ಹೆಚ್ಚಳ ಕಂಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಜೂನ್ ತಿಂಗಳಲ್ಲಿ ಬಿತ್ತನೆ ಆರಂಭವಾಗಿದ್ದು, ಸೆಪ್ಟೆಂಬರ್ ಮಧ್ಯಭಾಗದಲ್ಲಿ ಫಸಲಿನ ಕೊಯ್ಲಿಗೆ ಚಾಲನೆ ನೀಡಲಾಗಿದೆ. ಭತ್ತ, ಮೆಕ್ಕೆಜೋಳ ಮತ್ತು ಸೋಯಾಬೀನ್ ಮುಂಗಾರಿನ ಪ್ರಮುಖ ಬೆಳೆಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.