ನವದೆಹಲಿ: ದೇಶದ ತಯಾರಿಕಾ ವಲಯದ ಚಟುವಟಿಕೆಯು ಒಂಬತ್ತು ತಿಂಗಳಿನಲ್ಲಿ ಎರಡನೇ ಬಾರಿಗೆ ಗರಿಷ್ಠ ಮಟ್ಟದ ಬೆಳವಣಿಗೆ ಕಂಡಿದೆ. ಆದರೆ, ಜುಲೈಗೆ ಹೋಲಿಸಿದರೆ ಆಗಸ್ಟ್‌ನಲ್ಲಿ ಅಲ್ಪ ಇಳಿಕೆ ಕಂಡಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಸಂಸ್ಥೆ ಹೇಳಿದೆ.
ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (ಪಿಎಂಐ) ಜುಲೈನಲ್ಲಿ ಎಂಟು ತಿಂಗಳ ಗರಿಷ್ಠ ಮಟ್ಟವಾದ 56.4ಕ್ಕೆ ತಲುಪಿತ್ತು. ಆದರೆ, ಆಗಸ್ಟ್‌ನಲ್ಲಿ 56.2ಕ್ಕೆ ಇಳಿಕೆ ಆಗಿದೆ.
ಸೂಚ್ಯಂಕವು 50 ಮತ್ತು ಅದಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಸಕಾರಾತ್ಮಕ ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸತತ 14ನೇ ತಿಂಗಳಿನಲ್ಲಿಯೂ ವಲಯದ ಚಟುವಟಿಕೆಯು ಸಕಾರಾತ್ಮಕ ಮಟ್ಟದಲ್ಲಿಯೇ ಇದೆ. ಬೇಡಿಕೆ ಹೆಚ್ಚಾಗಿರುವುದು ಮತ್ತು ಹಣದುಬ್ಬರ ಆತಂಕ ಕಡಿಮೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಸ್ ಅ್ಯಂಡ್ ಪಿ ಸಂಸ್ಥೆಯು ತಿಳಿಸಿದೆ.
‘ದೇಶದಲ್ಲಿ ಕೋವಿಡ್–19ಗೆ ಸಂಬಂಧಿಸಿದ ನಿರ್ಬಂಧಗಳು ಇಲ್ಲದೇ ಇರುವುದರಿಂದ ತಯಾರಿಕಾ ಚಟುವಟಿಕೆಗಳು ಬೆಳವಣಿಗೆ ಉತ್ತಮವಾಗಿವೆ. ಉತ್ಪಾದನೆ ಮತ್ತು ಹೊಸ ಬೇಡಿಕೆಗಳ ಮಟ್ಟದಲ್ಲಿ ಹೆಚ್ಚಳ ಕಂಡುಬರುತ್ತಿದ್ದು, ಇದು ಕಳೆದ ವರ್ಷದ ನವೆಂಬರ್‌ಗಿಂತಲೂ ಅಧಿಕ ಮಟ್ಟದಲ್ಲಿದೆ ಎಂದು ಸಂಸ್ಥೆಯ ಅರ್ಥಶಾಸ್ತ್ರದ ಸಹಾಯಕ ನಿರ್ದೇಶಕಿ ಪಾಲಿಯಾನ ಡಿ. ಲಿಮಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.