ನವದೆಹಲಿ: ದೇಶದ ವಿಮಾನ ಪ್ರಯಾಣಿಕರ ಸಂಖ್ಯೆ 2030ರ ವೇಳೆಗೆ 30 ಕೋಟಿಗೆ ತಲುಪುವ ನಿರೀಕ್ಷೆ ಇದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಸೋಮವಾರ ಹೇಳಿದ್ದಾರೆ.
ದೇಶದ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ₹92 ಸಾವಿರ ಕೋಟಿಗೂ ಹೆಚ್ಚು ಖರ್ಚು ಮಾಡಲಾಗುತ್ತಿದೆ. ಭಾರತ ಮತ್ತು ಫ್ರಾನ್ಸ್ ದೃಢವಾದ ಜಾಗತಿಕ ಸುಸ್ಥಿರ ವಿಮಾನ ಇಂಧನ (ಎಸ್‌ಎಎಫ್) ಪೂರೈಕೆಯನ್ನು ಅಭಿವೃದ್ಧಿಪಡಿಸಲು ಒಟ್ಟಾಗಿ ಕೆಲಸ ಮಾಡಲಿದೆ ಎಂದು ಇಲ್ಲಿ ಆಯೋಜಿಸಿದ್ದ ಫ್ರೆಂಚ್ ಏರೋಸ್ಪೇಸ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಜಿಐಎಫ್‌ಎಎಸ್) ಕಾರ್ಯಕ್ರಮದಲ್ಲಿ ಹೇಳಿದರು.
ಭಾರತವು ಜಗತ್ತಿನಲ್ಲಿ ನಾಗರಿಕ ವಿಮಾನಯಾನ ಮಾರುಕಟ್ಟೆಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ವಿಮಾನಯಾನ ಸಂಸ್ಥೆಗಳು ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿವೆ ಎಂದರು. ಪ್ರಸ್ತುತ ದೇಶದಲ್ಲಿ 157 ವಿಮಾನ ನಿಲ್ದಾಣ, ಹೆಲಿಪೋರ್ಟ್ ಮತ್ತು ವಾಟರ್‌ಡ್ರೋಮ್‌ಗಳು ಇವೆ. 2025ರ ಅಂತ್ಯದ ವೇಳೆಗೆ ವಿಮಾನ ನಿಲ್ದಾಣಗಳ ಸಂಖ್ಯೆ 200ಕ್ಕೆ ಏರಿಕೆಯಾಗುವ ಅಂದಾಜಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.