ನವದೆಹಲಿ: ಭಾರತವು ಹೊರದೇಶಗಳಿಂದ ಪಡೆದಿರುವ ಸಾಲದ ಪ್ರಮಾಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ, ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಶೇಕಡ 2.1ರಷ್ಟು ಹೆಚ್ಚಳವಾಗಿದೆ. ದೇಶದ ಸಾಲದ ಮೊತ್ತವು 570 ಬಿಲಿಯನ್ ಅಮೆರಿಕನ್ ಡಾಲರ್‌ಗೆ (₹42.36 ಲಕ್ಷ ಕೋಟಿ) ತಲುಪಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ವಿದೇಶಿ ಸಾಲ ಮತ್ತು ದೇಶದ ಜಿಡಿಪಿ ನಡುವಣ ಅನುಪಾತವು ಹಿಂದಿನ ವರ್ಷದಲ್ಲಿ ಶೇ 20.6ರಷ್ಟು ಇದ್ದಿದ್ದು, ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಶೇ 21.1ಕ್ಕೆ ಹೆಚ್ಚಳ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.