ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಉತ್ಪಾದನೆಯು ಕಳೆದ ವರ್ಷದ ನವೆಂಬರ್‌ಗೆ ಹೋಲಿಸಿದರೆ ಈ ವರ್ಷದ ನವೆಂಬರ್‌ನಲ್ಲಿ ಶೇಕಡ 2ರಷ್ಟು ಇಳಿಕೆ ಆಗಿದೆ.
2020ರ ನವೆಂಬರ್‌ನಲ್ಲಿ 24.8 ಲಕ್ಷ ಟನ್ ಕಚ್ಚಾ ತೈಲ ಉತ್ಪಾದನೆ ಆಗಿತ್ತು. ಈ ಬಾರಿಯ ನವೆಂಬರ್‌ನಲ್ಲಿ 24.3 ಲಕ್ಷ ಟನ್‌ಗೆ ಇಳಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಕಚ್ಚಾ ತೈಲ ಉತ್ಪಾದನೆಯಲ್ಲಿ ಇಳಿಕೆ ಆಗಿರುವುದೇ ಇದಕ್ಕೆ ಕಾರಣ.
ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ಒಎನ್‌ಜಿಸಿ) ಕಳೆದ ವರ್ಷದ ನವಂಬರ್‌ಗೆ ಹೋಲಿಸಿದರೆ ಈ ವರ್ಷದ ನವೆಂಬರ್‌ನಲ್ಲಿ ಶೇ 3ರಷ್ಟು ಕಡಿಮೆ ಉತ್ಪಾದನೆ ಮಾಡಿದೆ. ಆಯಿಲ್ ಇಂಡಿಯಾ ಲಿಮಿಟೆಡ್ (ಒಐಎಲ್) ಉತ್ಪಾದನೆ 2.43 ಲಕ್ಷ ಟನ್‌ನಿಂದ 2.41 ಲಕ್ಷ ಟನ್‌ಗೆ ಇಳಿಕೆ ಆಗಿದೆ.
ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ನವೆಂಬರ್ ಅವಧಿಯಲ್ಲಿ ಕಚ್ಚಾ ತೈಲ ಉತ್ಪಾದನೆ 1.98 ಕೋಟಿ ಟನ್ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 2.74ರಷ್ಟು ಇಳಿಕೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.