ನವದೆಹಲಿ: ಅಕ್ಟೋಬರ್‌ನಲ್ಲಿ ದೇಶದ ವಿದ್ಯುತ್ ಬಳಕೆ ಪ್ರಮಾಣ 14,047 ಕೋಟಿ ಯೂನಿಟ್ ಆಗಿದೆ.
2023ರ ಇದೇ ತಿಂಗಳಿನಲ್ಲಿ 13,944 ಕೋಟಿ ಯೂನಿಟ್ ವಿದ್ಯುತ್ ಬಳಕೆಯಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 1ರಷ್ಟು ಹೆಚ್ಚಳವಾಗಿದೆ. 2022ರ ಇದೇ ಅವಧಿಯಲ್ಲಿ 11,394 ಯೂನಿಟ್ ವಿದ್ಯುತ್ ಬಳಕೆಯಾಗಿತ್ತು ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿವೆ.
ಮೇ ತಿಂಗಳಲ್ಲಿ ವಿದ್ಯುತ್ ಬೇಡಿಕೆಯು ಸಾರ್ವಕಾಲಿಕ ಗರಿಷ್ಠಮಟ್ಟವಾದ 250 ಗಿಗಾವಾಟ್‌ಗೆ ತಲುಪಿತ್ತು. ಉತ್ತರ ಭಾರತದಲ್ಲಿ ತಾಪಮಾನ ಹೆಚ್ಚಳದಿಂದಾಗಿ ಹವಾ ನಿಯಂತ್ರಕ, ಕೂಲರ್ಸ್‌ಗಳ ಬಳಕೆಯಲ್ಲಿ ಏರಿಕೆಯಾಗಿದೆ. ಇದರಿಂದ ವಿದ್ಯುತ್ ಬಳಕೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಮುಂಬರುವ ದಿನಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಹೆಚ್ಚಳವಾಗಲಿವೆ. ಹಾಗಾಗಿ, ವಿದ್ಯುತ್ ಬೇಡಿಕೆ ಮತ್ತು ಬಳಕೆ ಪ್ರಮಾಣವೂ ಏರಿಕೆಯಾಗಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.