ADVERTISEMENT

ಜಿಡಿಪಿ: ಶೇ 6.1ರಿಂದ ಶೇ 6.7ರಷ್ಟು ಪ್ರಗತಿ ನಿರೀಕ್ಷೆ

ಪಿಟಿಐ
Published 26 ಮೇ 2024, 15:09 IST
Last Updated 26 ಮೇ 2024, 15:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯು ಶೇ 6.1ರಿಂದ ಶೇ 6.7ರಷ್ಟು ಪ್ರಗತಿ ಕಾಣಲಿದೆ ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಇದು ಡಿಸೆಂಬರ್‌ ತ್ರೈಮಾಸಿಕದಲ್ಲಿ ದಾಖಲಾಗಿದ್ದಕ್ಕಿಂತಲೂ ಕಡಿಮೆಯಿದೆ. 

2023–24ನೇ ಪೂರ್ಣ ಆರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ 7.6ರಿಂದ ಶೇ 7.8ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿದ್ದಾರೆ. 

ADVERTISEMENT

ಜಿಡಿಪಿಯು ಜೂನ್‌ ತ್ರೈಮಾಸಿಕದಲ್ಲಿ ಶೇ 8.2ರಷ್ಟು, ಸೆಪ್ಟೆಂಬರ್‌ನಲ್ಲಿ ಶೇ 8.1 ಹಾಗೂ ಡಿಸೆಂಬರ್‌ ತ್ರೈಮಾಸಿಕದಲ್ಲಿ ಶೇ 8.4ರಷ್ಟು ದಾಖಲಾಗಿದೆ. 

‘ಕೊನೆಯ ತ್ರೈಮಾಸಿಕದಲ್ಲಿ ದೇಶದ ತಯಾರಿಕಾ ವಲಯದ ಚಟುವಟಿಕೆಗಳು ಉತ್ತಮಗೊಂಡಿವೆ. ನಿರ್ಮಾಣ ಮತ್ತು ಹೂಡಿಕೆ ವಲಯದ ಬೆಳವಣಿಗೆಯೂ ಸದೃಢವಾಗಿದೆ. ಆದರೆ, ಕೃಷಿ ವಲಯದ ಚಟುವಟಿಕೆಗಳು ಕುಗ್ಗಿವೆ. ಹಾಗಾಗಿ, ಮಾರ್ಚ್‌ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ 6.1ರಷ್ಟು ದಾಖಲಾಗಲಿದೆ. ಪೂರ್ಣ ಹಣಕಾಸು ವರ್ಷದಲ್ಲಿ ಶೇ 7.6ರಷ್ಟು ಪ್ರಗತಿ ಕಾಣಲಿದೆ’ ಎಂದು ಕೋಟಕ್‌ ಮಹೀಂದ್ರ ಬ್ಯಾಂಕ್‌ನ ಮುಖ್ಯ ಅರ್ಥಶಾಸ್ತ್ರಜ್ಞೆ ಉಪಾಸನಾ ಭಾರದ್ವಾಜ್‌ ಹೇಳಿದ್ದಾರೆ.

‘ಮಾರ್ಚ್‌ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ 7.8ರಷ್ಟು ಹಾಗೂ ಪೂರ್ಣ ಆರ್ಥಿಕ ವರ್ಷದಲ್ಲಿ ಶೇ 7.8ರಷ್ಟು ಪ್ರಗತಿ ಕಾಣಲಿದೆಯೆಂದು ಐಎಂಎಫ್‌ ಅಂದಾಜಿಸಿದೆ’ ಎಂದು ಇವೈ ಇಂಡಿಯಾದ  ಮುಖ್ಯ ನೀತಿ ಸಲಹೆಗಾರ ಡಿ.ಕೆ. ಶ್ರೀವಾಸ್ತವ ಹೇಳಿದ್ದಾರೆ.

ದೇಶೀಯ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿಯಾದ ಇಂಡಿಯಾ ರೇಟಿಂಗ್ಸ್ ಆ್ಯಂಡ್‌ ರಿಸರ್ಚ್, ಕೊನೆಯ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ 6.2ರಷ್ಟು ಪ್ರಗತಿ ಕಾಣಲಿದೆ ಎಂದು ಹೇಳಿದೆ. 

ಕಳೆದ ತಿಂಗಳಿನಲ್ಲಿ ನಡೆದ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯು 2023–24ನೇ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತೆಯು ಶೇ 7ರಷ್ಟು ಬೆಳವಣಿಗೆ ಕಾಣಲಿದೆ ಎಂದು ಅಂದಾಜಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.