ನವದೆಹಲಿ: ಗಣಿ ಮತ್ತು ತಯಾರಿಕಾ ವಲಯದ ಚಟುವಟಿಕೆಗಳು ಕುಗ್ಗಿದ ಪರಿಣಾಮ ಜುಲೈ ತಿಂಗಳಿನಲ್ಲಿ ದೇಶದ ಕೈಗಾರಿಕಾ ಉತ್ಪಾದನೆಯು ಶೇ 4.8ರಷ್ಟು ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ.
ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಈ ಬೆಳವಣಿಗೆಯು ಕಳೆದ ವರ್ಷದ ಜುಲೈನಲ್ಲಿ ಶೇ 6.2ರಷ್ಟು ದಾಖಲಾಗಿತ್ತು ಎಂದು ಗುರುವಾರ ಬಿಡುಗಡೆಯಾಗಿರುವ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ ವರದಿ ತಿಳಿಸಿದೆ.
ಕಳೆದ ವರ್ಷದ ಜುಲೈನಲ್ಲಿ ಶೇ 5.3ರಷ್ಟಿದ್ದ ತಯಾರಿಕಾ ವಲಯದ ಬೆಳವಣಿಗೆಯು ಶೇ 4.6ಕ್ಕೆ ಇಳಿಕೆಯಾಗಿದೆ. ಗಣಿಗಾರಿಕೆ ಉತ್ಪಾದನೆಯು ಶೇ 7.9ರಿಂದ ಶೇ 3.7ಕ್ಕೆ ತಗ್ಗಿದೆ ಎಂದು ತಿಳಿಸಿದೆ.
ಕಳೆದ ವರ್ಷದ ಏಪ್ರಿಲ್–ಜುಲೈ ಅವಧಿಯಲ್ಲಿ ಶೇ 5.1ರಷ್ಟಿದ್ದ ಕೈಗಾರಿಕಾ ಉತ್ಪಾದನೆ ಸೂಚ್ಯಂಕವು, ಪ್ರಸಕ್ತ ವರ್ಷದ ಇದೇ ಅವಧಿಯಲ್ಲಿ ಶೇ 5.2ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.