ನವದೆಹಲಿ: ತಯಾರಿಕಾ ವಲಯದ ಉತ್ಪನ್ನಗಳಿಗೆ ಹೆಚ್ಚಿದ ಬೇಡಿಕೆಯಿಂದಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೈಗಾರಿಕಾ ಉತ್ಪಾದನೆಯು ಶೇ 3.1ರಷ್ಟು ಏರಿಕೆಯಾಗಿದೆ.
ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಈ ಬೆಳವಣಿಗೆಯು 2023ರ ಸೆಪ್ಟೆಂಬರ್‌ನಲ್ಲಿ ಶೇ 6.4ರಷ್ಟು ದಾಖಲಾಗಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಂಗಳವಾರ ತಿಳಿಸಿದೆ.
ಗಣಿಗಾರಿಕೆ ಶೇ 0.2ರಷ್ಟು, ತಯಾರಿಕಾ ಶೇ 3.9ರಷ್ಟು ಮತ್ತು ವಿದ್ಯುತ್ ವಲಯದ ಬೆಳವಣಿಗೆಯು ಶೇ 0.5ರಷ್ಟು ದಾಖಲಾಗಿದೆ ಎಂದು ಹೇಳಿದೆ.
ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಐಐಪಿ ಬೆಳವಣಿಗೆಯು ಶೇ 4ರಷ್ಟು ಆಗಿದೆ. ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಶೇ 6.2ರಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.