ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ) ಜೂನ್ ತ್ರೈಮಾಸಿಕದಲ್ಲಿ ಒಟ್ಟು ₹ 1,992 ಕೋಟಿ ನಿವ್ವಳ ನಷ್ಟ ಕಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ತಡೆಹಿಡಿದಿದ್ದು ಇದಕ್ಕೆ ಕಾರಣ ಎಂದು ಕಂಪನಿ ಹೇಳಿದೆ.
ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 5,941 ಕೋಟಿ ನಿವ್ವಳ ಲಾಭ ಗಳಿಸಿತ್ತು. ಎರಡು ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ತ್ರೈಮಾಸಿಕವೊಂದರಲ್ಲಿ ನಷ್ಟ ಅನುಭವಿಸಿರುವುದು ಇದೇ ಮೊದಲು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.
ಕಚ್ಚಾ ತೈಲದ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಾಗಿದ್ದರೂ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳಾದ ಐಒಸಿ, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಬೆಲೆಯನ್ನು ಏಪ್ರಿಲ್–ಜೂನ್ ಅವಧಿಯಲ್ಲಿ ಹೆಚ್ಚಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.