ADVERTISEMENT

ಇಸ್ರೇಲ್ ಕಂಪನಿಯಿಂದ 100 ಆಮ್ಲಜನಕ ಕಾನ್ಸನ್‌ಟ್ರೇಟರ್‌ ನೆರವು

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 22:37 IST
Last Updated 14 ಜೂನ್ 2021, 22:37 IST

ಬೆಂಗಳೂರು: ಇಸ್ರೇಲ್‌ ಏರೋಸ್ಪೇಸ್ ಇಂಡಸ್ಟ್ರೀಸ್ (ಐಎಐ) ಕಂಪನಿಯು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ಗೆ (ಬಿಇಎಲ್) 100 ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ನೀಡಿದೆ.

ಕೋವಿಡ್‌ ಪೀಡಿತರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳನ್ನು ಬಳಸಲಾಗುತ್ತದೆ. ಬಿಇಎಲ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕಿ ಆನಂದಿ ರಾಮಲಿಂಗಂ ಅವರು ಕಾನ್ಸನ್‌ಟ್ರೇಟರ್‌ಗಳನ್ನು ಬಿಇಎಲ್‌ನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಕೆ.ಎಂ. ಶಿವಕುಮಾರನ್ ಅವರಿಗೆ ಹಸ್ತಾಂತರಿಸಿದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT