ನವದೆಹಲಿ: ಐಟಿಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಪುರಿ 2024–25ನೇ ಸಾಲಿಗೆ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಟಿವಿಎಸ್ ಸಪ್ಲೈ ಚೈನ್ ಸಲ್ಯೂಷನ್ಸ್‌ನ ಅಧ್ಯಕ್ಷ ಆರ್. ದಿನೇಶ್ ಅವರಿಂದ ಪುರಿ ಅಧಿಕಾರ ವಹಿಸಿಕೊಂಡರು ಎಂದು ಮಂಡಳಿ ಭಾನುವಾರ ತಿಳಿಸಿದೆ.
ಪುರಿ ಅವರು ಐಟಿಸಿ ಇನ್ಫೋಟೆಕ್ ಇಂಡಿಯಾ ಲಿಮಿಟೆಡ್, ಬ್ರಿಟನ್ ಮತ್ತು ಅಮೆರಿಕದಲ್ಲಿನ ಅದರ ಅಂಗಸಂಸ್ಥೆಗಳು ಹಾಗೂ ಸೂರ್ಯ ನೇಪಾಲ್ ಪ್ರೈವೆಟ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದಾರೆ.
ಟಾಟಾ ಕೆಮಿಕಲ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್. ಮುಕುಂದನ್ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.