ADVERTISEMENT

ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಂಪಿಯಲ್ಲಿ ಜಿಯೋ 4ಜಿ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2022, 12:51 IST
Last Updated 18 ಮಾರ್ಚ್ 2022, 12:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಯುನೆಸ್ಕೋ ವಿಶ್ವ ಪರಂಪರೆಯ ತಾಣ, ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಈಗ ಜಿಯೋ ಟ್ರೂ 4ಜಿ ಡಿಜಿಟಲ್‌ ಲೈಫ್‌ ಪರಿಚಯಿಸಿದೆ. ನೆಟ್‌ವರ್ಕ್‌ ಲಭ್ಯತೆಗಾಗಿ ಪ್ರತಿದಿನ ಹಲವು ಕಿಲೋಮೀಟರ್‌ ದೂರ ಪ್ರಯಾಣಿಸದೆಯೇ ತಮ್ಮ ಶಿಕ್ಷಣವನ್ನು ಮುಂದುವರಿಸಲು, ಯುವಜನತೆ ಮನೆಯಿಂದಲೇ ಕೆಲಸ ಮಾಡಲು ಅನುಕೂಲವಾಗಿರುವುದಾಗಿ ಜಿಯೋ ಪ್ರಕಟಿಸಿದೆ.

ಹಂಪಿಯ ನಿವಾಸಿಗಳು ಈಗ ಜಿಯೋ ಡಿಜಿಟಲ್ ಲೈಫ್ ಅನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಅನುಭವಿಸಬಹುದು ಮತ್ತು ಜಿಯೋದ ಕೈಗೆಟುಕುವ ದರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

‌ಜಿಯೊ ಡಿಜಿಟಲ್ ಲೈಫ್ ರಾಜ್ಯದ ಚಂದಾದಾರರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿರುವುದಾಗಿ ಪ್ರಕಟಿಸಿದೆ.

* ಜಿಯೋ ಮೂಲಕ ಕರ್ನಾಟಕದಾದ್ಯಂತ ತಡೆರಹಿತ ಸಂಪರ್ಕ, ದೃಢವಾದ ಮತ್ತು ವ್ಯಾಪಕವಾದ 4G ನೆಟ್‌ವರ್ಕ್

ADVERTISEMENT

* ಜಿಯೋದ ಅನಿಯಮಿತ ಕರೆ ಮತ್ತು ಡೇಟಾ ಪ್ರಯೋಜನಗಳು

* JioTV (ಪ್ರಯಾಣದಲ್ಲಿ ಹೆಚ್ಚು ಜನಪ್ರಿಯವಾಗಿರುವ, ಕ್ಯಾಚ್-ಅಪ್ ಟಿವಿ ಅಪ್ಲಿಕೇಶನ್), JioCinema ಮತ್ತು ಇನ್ನಿತರ ವಿಷಯಗಳನ್ನು ಒಳಗೊಂಡಿರುವ Jio ಪ್ರೀಮಿಯಂ ಅಪ್ಲಿಕೇಶನ್‌ಗಳ ಪ್ರವೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.