ನವದೆಹಲಿ: ಹೊಸ ಕಾರ್ಯತಂತ್ರ, ನೂತನ ಜಿಯೋಫೋನ್ ಕೊಡುಗೆಗಳು ಮತ್ತು ಕಡಿಮೆ ದರದ ಸ್ಮಾರ್ಟ್‌ಫೋನ್ ಬಿಡುಗಡೆ.. ಇವು ಜಿಯೋ ಚಂದಾದಾರರ ಸಂಖ್ಯೆ ಏರಿಕೆಗೆ ಕಾರಣವಾಗಲಿದೆ ಎಂದು ವರದಿಗಳು ಹೇಳಿವೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಯೋ ಚಂದಾದಾರರ ಸಂಖ್ಯೆ ಸ್ಥಿರವಾಗಿದೆ. ಡೇಟಾ ಬಳಕೆದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಆದರೆ ಕೆಲವೊಂದು ಹೊಸ ಯೋಜನೆಗಳ ಘೋಷಣೆ ಮತ್ತು ಪ್ರತಿಸ್ಪರ್ಧಿ ಕಂಪನಿಗಳೊಂದಿಗೆ ಹೋಲಿಕೆ ಮಾಡಿದರೆ ಮೊಬೈಲ್ ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆಯಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ ಎಂದು ಜೆಎಂ ಫೈನಾನ್ಶಿಯಲ್ ಹೇಳಿದೆ.
ಜಿಯೋಫೋನ್ ಕೊಡುಗೆಗಳು, ಕಡಿಮೆ ದರದ ಸ್ಮಾರ್ಟ್‌ಫೋನ್ ಬಿಡುಗಡೆ ಕೂಡ ಮತ್ತಷ್ಟು ಹೆಚ್ಚಿನ ಚಂದಾದಾರರನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ವರದಿ ತಿಳಿಸಿದೆ.
ಈ ಎಲ್ಲ ಕ್ರಮಗಳಿಂದಾಗಿ 2022ನೇ ಹಣಕಾಸು ವರ್ಷದಲ್ಲಿ ಜಿಯೋ ಬಳಕೆದಾರರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎಂದು ಜೆಎಂ ಫೈನಾನ್ಶಿಯಲ್ ವರದಿಯಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.