ನವದೆಹಲಿ: ಜೆಎಸ್‌ಡಬ್ಲ್ಯುಸ್ಟೀಲ್ 2023–24ರ ಹಣಕಾಸು ವರ್ಷದಲ್ಲಿ ಒಟ್ಟು 2.64 ಕೋಟಿ ಟನ್ ಕಚ್ಚಾ ಉಕ್ಕನ್ನು ಉತ್ಪಾದನೆ ಮಾಡಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ 2.41 ಕೋಟಿ ಟನ್ ಉತ್ಪಾದನೆ ಆಗಿತ್ತು. ಅದಕ್ಕೆ ಹೋಲಿಸಿದರೆ ಶೇ 9ರಷ್ಟು ಏರಿಕೆ ಎಂದು ಕಂಪನಿ ಸೋಮವಾರ ತಿಳಿಸಿದೆ. ಕಂಪನಿಯು ತನ್ನ ಭಾರತದ ಕಾರ್ಯಾಚರಣೆಗಳಿಂದ 2.55 ಕೋಟಿ ಟನ್ ಉಕ್ಕನ್ನು ಉತ್ಪಾದಿಸಿದ್ದರೆ, ಕಳೆದ ಹಣಕಾಸು ವರ್ಷದಲ್ಲಿ 2.36 ಕೋಟಿ ಟನ್ ಉತ್ಪಾದಿಸಿತ್ತು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಜನವರಿ–ಮಾರ್ಚ್ ತ್ರೈಮಾಸಿಕದಲ್ಲಿ 67 ಲಕ್ಷ ಟನ್ ಉತ್ಪಾದನೆಯಾಗಿದ್ದು, ಹಿಂದಿನ ಇದೇ ಅವಧಿಯಲ್ಲಿ 65 ಲಕ್ಷ ಟನ್ ಆಗಿತ್ತು. ಶೇ 3ರಷ್ಟು ಹೆಚ್ಚಳವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.