ADVERTISEMENT

ಎಂಎಸ್ಎಂಇಗೆ ಬಜೆಟ್‌ ಬೆಂಬಲ: ಕಾಸಿಯಾ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 17:00 IST
Last Updated 23 ಜುಲೈ 2024, 17:00 IST
ಎಂ.ಜಿ. ರಾಜಗೋಪಾಲ್
ಎಂ.ಜಿ. ರಾಜಗೋಪಾಲ್   

ಬೆಂಗಳೂರು: ತಯಾರಿಕಾ ವಲಯದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್‌ಎಂಇ) ಬಜೆಟ್‌ನಲ್ಲಿ ಹಣಕಾಸಿನ ನೆರವು ಒದಗಿಸಲಾಗಿದೆ. ₹100 ಕೋಟಿ ವರೆಗಿನ ಕ್ರೆಡಿಟ್‌ ಗ್ಯಾರಂಟಿ ಯೋಜನೆಯು ಯಂತ್ರೋಪಕರಣಗಳ ಹೂಡಿಕೆಗೆ ಉತ್ತೇಜಿಸಲು ಮತ್ತು ಉತ್ಪಾದಕತೆ ಹೆಚ್ಚಿಸಲು ನೆರವಾಗಲಿದೆ ಎಂದು ಕಾಸಿಯಾ ತಿಳಿಸಿದೆ.

ಔಪಚಾರಿಕ ವಲಯದ ಉದ್ಯೋಗ ಉತ್ತೇಜಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಮೂರು ಉದ್ಯೋಗ ಸಂಯೋಜಿತ ಪ್ರೋತ್ಸಾಹ ಯೋಜನೆಗಳನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.

ಸಾಲ ಮರು ಪಾವತಿಸಿದ ಉದ್ಯಮಿಗಳಿಗೆ ಮುದ್ರಾ ಯೋಜನೆಯಡಿ ನೀಡುವ ಸಾಲವನ್ನು ₹10 ಲಕ್ಷದಿಂದ ₹20 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದು ಸಣ್ಣ ಉದ್ಯಮಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸಲು ಸಹಕಾರಿಯಾಗಲಿದೆ. 100 ನಗರಗಳಲ್ಲಿ ‘ಪ್ಲಗ್ ಮತ್ತು ಪ್ಲೇ’ ಕೈಗಾರಿಕಾ ಪಾರ್ಕ್‌ಗಳ ಘೋಷಣೆಯು ಹೂಡಿಕೆಯನ್ನು ಆಕರ್ಷಿಸಲಿದೆ. ಜೊತೆಗೆ, ಕೈಗಾರಿಕಾ ಮೂಲ ಸೌಕರ್ಯದ ಅಭಿವೃದ್ಧಿಗೂ ನೆರವಾಗಲಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.