ನವದೆಹಲಿ: ಕಿಯಾ ಸೆಲ್ಟೋಸ್ ಎಸ್‌ಯುವಿ ಪೆಟ್ರೋಲ್ ಮಾದರಿಯ ಕೆಲವು ಕಾರುಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಎಂದು ದಕ್ಷಿಣ ಕೊರಿಯಾದ ಕಾರು ತಯಾರಕಾ ಕಂಪನಿ ಕಿಯಾ ಇಂಡಿಯಾ ತಿಳಿಸಿದೆ.
2023ರ ಫೆಬ್ರುವರಿ 28ರಿಂದ ಜುಲೈ 13ರ ನಡುವೆ ತಯಾರಿಸಿರುವ 4,358 ಕಾರುಗಳಲ್ಲಿನ ಎಲೆಕ್ಟ್ರಾನಿಕ್ ಆಯಿಲ್ ಪಂಪ್ ಕಂಟ್ರೋಲರ್‌ನಲ್ಲಿ ದೋಷ ಕಂಡುಬಂದಿದೆ. ಈ ಕಾರುಗಳನ್ನು ವಾಪಸ್ ಪಡೆದು ದೋಷ ಸರಿಪಡಿಸಿ ಮಾಲೀಕರಿಗೆ ಮರಳಿಸಲಾಗುವುದು ಎಂದು ಕಂಪನಿ ತಿಳಿಸಿದೆ.
ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯಕ್ಕೂ ಮಾಹಿತಿ ನೀಡಲಾಗಿದೆ. ಗ್ರಾಹಕರ ಸುರಕ್ಷತೆಯೇ ಕಂಪನಿಯ ಆದ್ಯತೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.