ADVERTISEMENT

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎಲ್ಐಸಿ ಲಾಭ ಇಳಿಕೆ

ಪಿಟಿಐ
Published 8 ನವೆಂಬರ್ 2024, 13:40 IST
Last Updated 8 ನವೆಂಬರ್ 2024, 13:40 IST
ಎಲ್ಐಸಿ
ಎಲ್ಐಸಿ   

ನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) 2024–25ನೇ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹7,621 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹7,925 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 4ರಷ್ಟು ಕಡಿಮೆಯಾಗಿದೆ ಎಂದು ನಿಗಮವು, ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.

ಒಟ್ಟು ವರಮಾನ ₹2.29 ಲಕ್ಷ ಕೋಟಿ ಆಗಿದೆ. ಹಿಂದಿನ ವರ್ಷ ₹2.01 ಲಕ್ಷ ಕೋಟಿ ಗಳಿಸಿತ್ತು. ಒಟ್ಟು ವೆಚ್ಚವು ₹2.22 ಲಕ್ಷ ಕೋಟಿಗೆ ಏರಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 2.43 ರಿಂದ ಶೇ 1.72ಕ್ಕೆ ಇಳಿದಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.