ADVERTISEMENT

ಆರೋಗ್ಯ ವಿಮೆ: ಈ ವರ್ಷವೇ ಖಾಸಗಿ ಕಂಪನಿಯ ಷೇರು ಖರೀದಿ– ಎಲ್‌ಐಸಿ

ಪಿಟಿಐ
Published 9 ನವೆಂಬರ್ 2024, 16:13 IST
Last Updated 9 ನವೆಂಬರ್ 2024, 16:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ‘ಆರೋಗ್ಯ ವಿಮಾ ಸೇವಾ ಕ್ಷೇತ್ರ ಪ್ರವೇಶಿಸುವ ಸಂಬಂಧ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಖಾಸಗಿ ಆರೋಗ್ಯ ವಿಮಾ ಕಂಪನಿಯೊಂದರ ಷೇರುಗಳನ್ನು ಖರೀದಿಸಲು ನಿರ್ಧರಿಸಲಾಗಿದೆ’ ಎಂದು ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸಿದ್ಧಾರ್ಥ ಮೊಹಂತಿ ತಿಳಿಸಿದ್ದಾರೆ.

‘ಎಲ್‌ಐಸಿಯು ಆರೋಗ್ಯ ವಿಮಾ ವಲಯಕ್ಕೆ ಹೆಜ್ಜೆ ಇಡಲು ಸಿದ್ಧವಿದೆ. ಇದಕ್ಕೆ ಪೂರಕವಾದ ಕೆಲಸಗಳು ನಡೆಯುತ್ತಿವೆ. ಸೂಕ್ತವಾದ ಕಂಪನಿಯ ಹುಡುಕಾಟ ನಡೆದಿದೆ. ಆ ಕಂಪನಿಯ ಮಾರುಕಟ್ಟೆ ಮೌಲ್ಯ ಸೇರಿ ಇತರೆ ವಿಷಯಗಳ ಮೇಲೆ ಎಷ್ಟು ಷೇರುಗಳನ್ನು ಖರೀದಿಸಬೇಕು ಎಂಬುದು ನಿರ್ಧಾರವಾಗಲಿದೆ’ ಎಂದು ತಿಳಿಸಿದ್ದಾರೆ.

‘ಷೇರುಗಳ ಖರೀದಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಆಡಳಿತ ಮಂಡಳಿಯ ಅನುಮೋದನೆ ಪಡೆದು ಆರೋಗ್ಯ ವಿಮಾ ಕ್ಷೇತ್ರವನ್ನು ಪ್ರವೇಶಿಸಲಾಗುವುದು’ ಎಂದು ತಿಳಿಸಿದ್ದಾರೆ.

ADVERTISEMENT

ದೇಶದಲ್ಲಿ ವಿಮಾ ಸೌಲಭ್ಯವನ್ನು ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಒಂದು ಕಂಪನಿಗೆ ಜೀವ ವಿಮೆ, ಸಾಮಾನ್ಯ ಅಥವಾ ಆರೋಗ್ಯ ವಿಮೆ ಸೌಲಭ್ಯ ನೀಡುವುದಕ್ಕೆ ಸಂಯೋಜಿತ ಪರವಾನಗಿ ನೀಡಬಹುದು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.