ನವದೆಹಲಿ: ಎಲ್‌ಪಿಜಿ ಸಿಲಿಂಡರ್ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಸಿಲಿಂಡರ್‌ಗಳ ಮೇಲೆ ಕ್ಯೂಆರ್ ಕೋಡ್ ನಮೂದಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಗುರುವಾರ ತಿಳಿಸಿದೆ.
ಅಡುಗೆ ಅನಿಲ ಸಿಲಿಂಡರ್‌ಗಳ ನಿಖರವಾದ ಟ್ರ್ಯಾಕಿಂಗ್ ಹಾಗೂ ದಾಸ್ತಾನು ನಿರ್ವಹಣೆಗೆ ಸಹಕಾರಿಯಾಗಲಿದೆ. ಜೊತೆಗೆ, ಕಳ್ಳತನ ತಡೆಗಟ್ಟಲು ನೆರವಾಗಲಿದೆ ಎಂದು ಹೇಳಿದೆ.
ಈಗಾಗಲೇ, ಸಿದ್ಧಪಡಿಸಿರುವ ಸಿಲಿಂಡರ್ ಬಳಕೆ ಸಂಬಂಧಿಸಿದ ಕರಡು ನಿಯಮಾವಳಿಗಳಲ್ಲಿ ಇದನ್ನು ಸೇರ್ಪಡೆಗೊಳಿಸಲಾಗಿದೆ. ಶೀಘ್ರವೇ, ಅಂತಿಮ ಅಧಿಸೂಚನೆ ಹೊರಬೀಳಲಿದೆ ಎಂದು ತಿಳಿಸಿದೆ.
ನವದೆಹಲಿಯಲ್ಲಿ ಬುಧವಾರ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೆಟ್ರೋಲಿಯಂ, ಎಕ್ಸ್‌ಪ್ಲೋಸಿವ್, ಪಟಾಕಿ ತಯಾರಕರ ಸಂಘದ ಪ್ರತಿನಿಧಿಗಳ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.