ಮುಂಬೈ: ವಾಹನ ತಯಾರಿಕಾ ಕಂಪನಿ ಮಹೀಂದ್ರ ಆ್ಯಂಡ್ ಮಹೀಂದ್ರ, 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹3,171 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹2,348 ಕೋಟಿ ಲಾಭ ಗಳಿಸಲಾಗಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 35ರಷ್ಟು ಏರಿಕೆಯಾಗಿದೆ. ವಾಹನಗಳ ಮಾರಾಟದಲ್ಲಿನ ಏರಿಕೆಯಿಂದ ಲಾಭದ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ.
₹37,924 ಕೋಟಿ ವರಮಾನ ಗಳಿಸಲಾಗಿದ್ದು, ಶೇ 10ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.