ಮುಂಬೈ: 2024–25ನೇ ಜೂನ್ ತ್ರೈಮಾಸಿಕದಲ್ಲಿ ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು, ₹3,283 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹2,745 ಕೋಟಿ ಲಾಭಗಳಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 20ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿಯು ಬುಧವಾರ ತಿಳಿಸಿದೆ.
ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹33,892 ಕೋಟಿ ವರಮಾನಗಳಿಸಿತ್ತು. ಈ ತ್ರೈಮಾಸಿಕದಲ್ಲಿ ₹37,218 ಕೋಟಿ ಗಳಿಸಿದೆ. ಒಟ್ಟಾರೆ ಶೇ 10ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
‘ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯ ಎಲ್ಲಾ ವಹಿವಾಟುಗಳ ಕಾರ್ಯಾಚರಣೆಯು ಉತ್ತಮ ಆರಂಭ ಕಂಡಿದೆ. ವಾಹನ ಮತ್ತು ರಿಯಲ್ ಎಸ್ಟೇಟ್ ವಿಭಾಗದ ಮಾರುಕಟ್ಟೆ ವಿಸ್ತರಣೆ ಮತ್ತು ಲಾಭದಲ್ಲಿ ಏರಿಕೆಯಾಗಿದೆ. ಪೂರ್ಣ ವರ್ಷದಲ್ಲಿ ಗ್ರಾಹಕರಿಗೆ ಮತ್ತಷ್ಟು ಸೇವೆ ಒದಗಿಸಲಾಗುವುದು’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅನಿಶ್ ಶಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.