ಮುಂಬೈ: ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ಮಾರ್ಚ್ ತ್ರೈಮಾಸಿಕದ ಲಾಭದಲ್ಲಿ ಶೇಕಡ 18ರಷ್ಟು ಏರಿಕೆ ದಾಖಲಿಸಿದೆ. ಕಂಪನಿಯ ತೆರಿಗೆ ನಂತರದ ಲಾಭವು ₹2,637 ಕೋಟಿಗೆ ತಲುಪಿದೆ.
ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯ ತೆರಿಗೆ ನಂತರದ ಲಾಭವು ₹2,237 ಕೋಟಿ ಆಗಿತ್ತು. ಹಿಂದಿನ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ವರಮಾನವು ₹ 25,934 ಕೋಟಿ ಆಗಿದ್ದುದು ಈ ಬಾರಿ ₹32,366 ಕೋಟಿಗೆ ಏರಿಕೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.