ADVERTISEMENT

ರಿಟರ್ನ್ಸ್‌ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿದರೆ ಶಿಕ್ಷೆ ಗ್ಯಾರಂಟಿ: ಎಚ್ಚರಿಕೆ

ಪಿಟಿಐ
Published 28 ಜುಲೈ 2024, 14:14 IST
Last Updated 28 ಜುಲೈ 2024, 14:14 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ತೆರಿಗೆದಾರರು ರಿಟರ್ನ್ಸ್‌ ಸಲ್ಲಿಕೆ ವೇಳೆ ವೆಚ್ಚಗಳಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಪತ್ರಗಳನ್ನು ಸಲ್ಲಿಸಬಾರದು. ಆದಾಯ ಗಳಿಕೆ ಬಗ್ಗೆಯೂ ತಪ್ಪು ಮಾಹಿತಿ ನೀಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಜೊತೆಗೆ, ಇದು ಮರುಪಾವತಿಯ (ರೀಫಂಡ್‌) ವಿಳಂಬಕ್ಕೂ ಕಾರಣವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು ತಿಳಿಸಿದೆ.  

2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ಎಲ್ಲಾ ವರ್ಗದ ತೆರಿಗೆದಾರರು ರಿಟರ್ನ್ಸ್‌ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ಮಾಹಿತಿ ಪ್ರಕಾರ, ಜುಲೈ 26ರ ವರೆಗೆ 5 ಕೋಟಿಗೂ ಹೆಚ್ಚು ತೆರಿಗೆದಾರರು ರಿಟರ್ನ್ಸ್‌ ಸಲ್ಲಿಸಿದ್ದಾರೆ.

ತೆರಿಗೆದಾರರು ಸರಿಯಾಗಿ ರಿಟರ್ನ್ಸ್‌ ಸಲ್ಲಿಸಿದರೆ ಸಕಾಲದಲ್ಲಿ ಮರುಪಾವತಿ ಮೊತ್ತವೂ ಬ್ಯಾಂಕ್‌ನ ಖಾತೆಗೆ ಜಮೆಯಾಗಲಿದೆ ಎಂದು ಇಲಾಖೆಯು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.