ADVERTISEMENT

₹ 4 ಸಾವಿರ ಕೋಟಿ ಹೂಡಿಕೆ: ಮಲಬಾರ್‌ ಗೋಲ್ಡ್‌

ಪಿಟಿಐ
Published 28 ಸೆಪ್ಟೆಂಬರ್ 2023, 16:12 IST
Last Updated 28 ಸೆಪ್ಟೆಂಬರ್ 2023, 16:12 IST
ಮಲಬಾರ್‌
ಮಲಬಾರ್‌   

ಮುಂಬೈ : ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್ ಕಂಪನಿಯು ವಹಿವಾಟು ವಿಸ್ತರಣೆಗಾಗಿ ಮುಂದಿನ ಹಣಕಾಸು ವರ್ಷದಲ್ಲಿ ₹ 4 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಎಂದು ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹಮದ್‌ ತಿಳಿಸಿದ್ದಾರೆ.

ಸದ್ಯ ಭಾರತದಲ್ಲಿ 300 ಮಳಿಗೆ ಮತ್ತು ಹೊರದೇಶಗಳಲ್ಲಿ ಒಟ್ಟು 11 ಮಳಿಗೆಗಳಿವೆ. 2024–25ನೇ ಹಣಕಾಸು ವರ್ಷದಲ್ಲಿ ದೇಶದಲ್ಲಿ 63 ಮತ್ತು ಆಸ್ಟ್ರೇಲಿಯಾ, ಬಾಂಗ್ಲಾದೇಶ, ಕೆನಡಾ, ಅಮೆರಿಕ ಸೇರಿದಂತೆ ವಿದೇಶದಲ್ಲಿ ಒಟ್ಟು 31 ಮಳಿಗೆಗಳನ್ನು ತೆರೆಯುವ ಯೋಜನೆ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT