ನವದೆಹಲಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಮನ್ಸುಖ್ ಮಾಂಡವೀಯ ಅವರು ಸೋಮವಾರ ‘ಇ–ಶ್ರಮ್–ಒನ್ ಸ್ಟಾಪ್ ಸಲ್ಯೂಷನ್‌ಗೆ ಚಾಲನೆ ನೀಡಿದರು.
ಈ ಪೋರ್ಟಲ್‌ನಡಿ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ದೊರೆಯಲಿದೆ. ಪ್ರತಿ ದಿನ ಸುಮಾರು 60 ಸಾವಿರದಿಂದ 90 ಸಾವಿರ ಕಾರ್ಮಿಕರು ಇ–ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಆಗುತ್ತಿದ್ದಾರೆ. ಇದು ಅವರಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಬಗ್ಗೆ ಫಲಾನುಭವಿಗಳು ಮಾಹಿತಿ ಪಡೆಯಲು ಇದರಿಂದ ನೆರವಾಗಲಿದೆ. ಈ ವೇದಿಕೆಯು ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದು, ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಮತ್ತು ಹೆಚ್ಚು ಪಾರದರ್ಶಕವನ್ನಾಗಿಸುವ ಮೂಲಕ ಕಾರ್ಮಿಕರನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.
ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು ಇ–ಶ್ರಮ್ ಪೋರ್ಟಲ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಮತ್ತು ವಿವಿಧ ಕಲ್ಯಾಣ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಕಾರ್ಮಿಕರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.