ADVERTISEMENT

8 ಕಂಪನಿಗಳ ಎಂ–ಕ್ಯಾಪ್‌: ₹1.29 ಲಕ್ಷ ಕೋಟಿ ಏರಿಕೆ

ಪಿಟಿಐ
Published 31 ಡಿಸೆಂಬರ್ 2023, 13:27 IST
Last Updated 31 ಡಿಸೆಂಬರ್ 2023, 13:27 IST
   

ನವದೆಹಲಿ: ಪ್ರಮುಖ 10 ಕಂಪನಿಗಳ ಪೈಕಿ 8 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ (ಎಂ–ಕ್ಯಾಪ್‌) ಕಳೆದ ವಾರ ₹1.29 ಲಕ್ಷ ಕೋಟಿಯಷ್ಟು ಏರಿಕೆ ಆಗಿದೆ.

ಕಳೆದ ವಾರ ಮುಂಬೈ ಷೇರು ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ 1,133 ಅಂಶ ಹೆಚ್ಚಳವಾಗಿದೆ. ಡಿಸೆಂಬರ್‌ 28ರಂದು ಸೂಚ್ಯಂಕವು 72,484 ಅಂಶದ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿತ್ತು.

ಎಚ್‌ಡಿಎಫ್‌ಸಿ ಬ್ಯಾಂಕ್‌ ಮಾರುಕಟ್ಟೆ ಮೌಲ್ಯ ₹29,828 ಕೋಟಿ, ಎಲ್‌ಐಸಿ ₹25,426 ಕೋಟಿ, ಭಾರ್ತಿ ಏರ್‌ಟೆಲ್‌ ₹24,510 ಕೋಟಿ, ಹಿಂದೂಸ್ತಾನ್‌ ಯೂನಿಲಿವರ್‌ ₹20,735 ಕೋಟಿ, ರಿಲಯನ್ಸ್‌ ಇಂಡಸ್ಟ್ರೀಸ್‌ ₹13,633 ಕೋಟಿ, ಐಟಿಸಿ ₹9,164 ಕೋಟಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ₹4,730 ಕೋಟಿ ಮತ್ತು ಐಸಿಐಸಿಐ ಬ್ಯಾಂಕ್‌ ₹1,869 ಕೋಟಿ ಗಳಿಕೆ ಕಂಡಿವೆ.

ADVERTISEMENT

ಟಿಸಿಎಸ್‌ ₹11,105 ಕೋಟಿ ಮತ್ತು ಇನ್ಫೊಸಿಸ್‌ ₹7,946 ಕೋಟಿ ಇಳಿಕೆ ಕಂಡಿವೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಪ್ರಮುಖ ಸಂಸ್ಥೆ ಎಂಬ ಹೆಗ್ಗಳಿಕೆ ಉಳಿಸಿಕೊಂಡಿದೆ. ನಂತರದ ಸ್ಥಾನದಲ್ಲಿ ಟಿಸಿಎಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಇನ್ಫೊಸಿಸ್‌, ಹಿಂದೂಸ್ತಾನ್‌ ಯೂನಿಲಿವರ್‌, ಭಾರ್ತಿ ಏರ್‌ಟೆಲ್‌, ಐಟಿಸಿ, ಎಸ್‌ಬಿಐ ಮತ್ತು ಎಲ್‌ಐಸಿ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.