ADVERTISEMENT

ಸಾಲ ವಿತರಣೆಗೆ ಅಡಚಣೆ ಬೇಡ ಬ್ಯಾಂಕ್‌ಗಳಿಗೆ ನಿರ್ಮಲಾ ಸಲಹೆ

ಪಿಟಿಐ
Published 12 ಮಾರ್ಚ್ 2020, 19:39 IST
Last Updated 12 ಮಾರ್ಚ್ 2020, 19:39 IST
ನಿರ್ಮಲಾ ಸೀತಾರಾಮನ್‌
ನಿರ್ಮಲಾ ಸೀತಾರಾಮನ್‌   

ನವದೆಹಲಿ: ವಿಲೀನಗೊಳ್ಳಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಸಾಲ ವಿತರಣೆಗೆ ಯಾವುದೇ ಅಡಚಣೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಲಹೆ ನೀಡಿದ್ದಾರೆ.

ವಿಲೀನ ಪ್ರಕ್ರಿಯೆಯಲ್ಲಿ ತೊಡಗಿರುವ ಬ್ಯಾಂಕ್‌ಗಳ ಮುಖ್ಯಸ್ಥರ ಜತೆ ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಗ್ರಾಹಕರಿಗೆ ಒದಗಿಸುವ ಬ್ಯಾಂಕಿಂಗ್‌ ಸೇವಾ ಮಟ್ಟದಲ್ಲಿ ಸುಧಾರಣೆಯಾಗಬೇಕು ಎಂದೂ ಹೇಳಿದ್ದಾರೆ.

ವಿಲೀನಕ್ಕೆ ಸಂಬಂಧಿಸಿದಂತೆ ನಡೆಸಿರುವ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ನಿರ್ಮಲಾ ಅವರಿಗೆ ವಿವರಣೆ ನೀಡಲಾಯಿತು ಎಂದು ಹಣಕಾಸು ಸೇವೆಗಳ ಇಲಾಖೆಯು ಟ್ವೀಟ್‌ ಮಾಡಿದೆ.

ADVERTISEMENT

ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಘೋಷಿಸಿರುವ 10 ಬ್ಯಾಂಕ್‌ಗಳ ವಿಲೀನದಿಂದಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಂಖ್ಯೆಯು ಈಗ 12ಕ್ಕೆ ಇಳಿಯಲಿದೆ. ಏಪ್ರಿಲ್‌ನಿಂದ ವಿಲೀನ ಜಾರಿಗೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.