ಬೆಂಗಳೂರು: ಇ–ಕಾಮರ್ಸ್ ಕಂಪನಿ ಮೀಶೂ ಕನ್ನಡ ಸೇರಿದಂತೆ ಒಟ್ಟು ಎಂಟು ಪ್ರಾದೇಶಿಕ ಭಾಷೆಗಳಲ್ಲಿ ಸೇವೆಗಳನ್ನು ಆರಂಭ ಮಾಡಿರುವುದಾಗಿ ಪ್ರಕಟಿಸಿದೆ.
ಇ–ವಾಣಿಜ್ಯ ಸೇವೆಗಳು ಎಲ್ಲರಿಗೂ ಲಭ್ಯವಾಗುವಂತೆ ಆಗಬೇಕು ಎಂಬ ಉದ್ದೇಶದಿಂದ ಪ್ರಾದೇಶಿಕ ಭಾಷೆಗಳಲ್ಲಿ ಸೇವೆಗಳನ್ನು ಆರಂಭಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ.
ಹಬ್ಬಗಳ ಋತು ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ಮೀಶೂ ಈ ಸೇವೆ ಆರಂಭಿಸುತ್ತಿದೆ. ಕನ್ನಡ ಮಾತ್ರವೇ ಅಲ್ಲದೆ ಬಂಗಾಳಿ, ತೆಲುಗು, ಮರಾಠಿ, ತಮಿಳು, ಗುಜರಾತಿ, ಮಲಯಾಳ ಮತ್ತು ಒಡಿಯಾ ಭಾಷೆಗಳಲ್ಲಿ ಮೀಶೂ ಸೇವೆಗಳು ಸಿಗಲಿವೆ.
ಸೇವೆಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾಷಾ ತಜ್ಞರ ಜೊತೆ ಕೆಲಸ ಮಾಡಲಾಗಿದೆ. ಪ್ರತಿ ಭಾಷೆಯಲ್ಲಿಯೂ ಸರಿಸುಮಾರು 33 ಸಾವಿರ ಪದಗಳನ್ನು ಬಳಕೆ ಮಾಡಲಾಗಿದೆ. ಜನರು ಹೆಚ್ಚಾಗಿ ಬಳಸುವ ಪದಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.